ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿನ ಸಭಾಂಗಣಗಳ ನಾಮಕರಣ ಹಾಗೂ ಹುತಾತ್ಮರ ಚೌಕ (ಶಹೀದ್ ಸ್ಥಳ)ದ ಶಂಕು ಸ್ಥಾಪನೆ ಕಾರ್ಯಕ್ರಮ ಅಕ್ಟೋಬರ್ 25 ರಂದು ಸಂಜೆ 5 ಗಂಟೆಗೆ, ಮಂಗಳಗಂಗೋತ್ರಿ, ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್ ಶಂಕು ಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಬಂದರು ಮತ್ತು ಮೀನುಗಾರಿಕಾ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಎಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.