ಕುಮಾರಸ್ವಾಮಿ ವಿರುದ್ಧ ಅವಹೇಳನ: ಕಠಿಣ ಕ್ರಮಕ್ಕೆ ಯುವಜನತಾ ದಳ ಆಗ್ರಹ

ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದು, ಇವರುಗಳ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ದ.ಕ.ಜಿಲ್ಲಾ ಯುವ ಜನತಾದಳ ಆಗ್ರಹಿಸಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಮಾನ್ಯ ಪೋಲಿಸ್ ಆಯುಕ್ತರಿಗೆ ಮತ್ತು ಸೈಬರ್ ಕ್ರೈಮ್ ಪೋಲಿಸರಿಗೆ ದೂರು ಸಲ್ಲಿಸಲಾಯಿತು.
ಅಂಥ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಿ, ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇಂತಹ ಕೃತ್ಯಗಳನ್ನು ನಡೆಸುವ ಸಮಾಜಘತಕ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಯುವಜನತಾದಳ   ಸಂಘಟನಾ ಕಾರ್ಯದರ್ಶಿ ಫೈಝಲ್ ರೆಹಮಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಜಿಲ್ಲಾ ಉಪಾಧ್ಯಕ್ಷರು ಮೊಹಮ್ಮದ್ ಆಸಿಫ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಫೈಝಲ್, ಮಂಗಳೂರು ಉತ್ತರ ಕ್ಷೇತ್ರಾಧ್ಯಕ್ಷ ರತೀಶ್ ಕರ್ಕೇರ , ಉಪಾಧ್ಯಕ್ಷ ಹಿತೇಶ್ ರೈ, ಶ್ರೀಕಾಂತ್ ಇತರರು ಉಪಸ್ತಿತರಿದ್ದರು.