ಮಂಗಳೂರು: ಆಗಸ್ಟ್ 5ರಂದು ಅಯೋಧ್ಯೆ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 5 ರಂದು 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
ಭೂಮಿ ಪೂಜಾನಾ ದಿನದಂದು ಹಿಂದೂ ಸಂಘಟನೆಗಳು ಸಂಭ್ರಮಾಚರಣೆಗೆ ಮುಂದಾಗಿದ್ದು, ಮುಸ್ಲೀಂ ಸಂಘಟನೆಗಳು ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಖಡಕ್ ಆದೇಶ ಹೊರಡಿಸಿದ್ದಾರೆ.