ಮಂಗಳೂರು: ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿ.ಎಂ,ಡಿ.ಕೆ. ಶಿವಕುಮಾರ್

ಮಂಗಳೂರು: ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆಗಳ ಮೇಲೆ ರಾಜಕೀಯ ಮಾಡುವುದಿಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.

ಮಂಗಳೂರಿನ ಗಾಂಧೀಜಿ ಅವರು ಉಳಿದುಕೊಂಡಿದ್ದ ಮನೆಗೆ ಭೇಟಿ ನೀಡಿ ಅಲ್ಲಿ ಉಪಹಾರ ಸೇವಿಸಿದ್ದೇನೆ. ಮಂಗಳೂರು ಬನ್ಸ್ ಹಾಗೂ ದೋಸೆಯನ್ನು ಸವಿದಿದ್ದೇನೆ. ಜಿಲ್ಲಾಮಂತ್ರಿಗಳು ಎಲ್ಲಿಗೆ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ ಎಂದು ಶಿವಕುಮಾರ್ ಹೇಳಿದರು.