ನಾಳೆಯಿಂದ ಮಂಗಳೂರಿನಲ್ಲಿ ಎಲ್ಲವೂ ಸಂಪೂರ್ಣ ಬಂದ್: ದ‌.ಕ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಮಂಗಳೂರು: ಕೊರೋನಾ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆ ನಾಳೆ ಮಂಗಳೂರು ಸಂಪೂರ್ಣ  ಬಂದಗಲಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಘೋಷಿಸಿದ್ದಾರೆ. ಇವತ್ತು ಅಗತ್ಯ ವಸ್ತು ಖರೀದಿಗೆ ಸಮಯ ಕೊಡಲಾಗಿದೆ, ಆದ್ರೆ ನಾಳೆಯಿಂದ ಅದೂ ಇಲ್ಲ ಈ ಬಗ್ಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆ ಮಾತುಕತೆ ಮಾಡುತ್ತಿದ್ದೇವೆ ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ ಸರ್ಕಾರದ ಕಡೆಯಿಂದ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಅಂತ ಮಾತುಕತೆ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.

ನಿನ್ನೆ ಅತೀ ಹೆಚ್ಚು ರೋಗಿಗಳು ಕೇರಳದಿಂದ ಮಂಗಳೂರಿಗೆ ಬಂದಿದ್ದಾರೆ ಆದ್ರೆ ಜಿಲ್ಲಾಡಳಿತ ಒಂದು ನಿರ್ಧಾರ ತೆಗೆದುಕೊಂಡಿದೆ

ಸದ್ಯದ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗಳು ‌ನಮಗೆ ಸಾಕಾಗಲ್ಲ, ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಸೇರಿ ಯಾವುದನ್ನೂ ಬಿಡಬಾರದು ಅಂತ ನಿರ್ಧರಿಸಲಾಗಿದೆ ಎಲ್ಲಾ ಅಂಬ್ಯುಲೆನ್ಸ್ ಗಳನ್ನ ತಲಪಾಡಿ ಗಡಿಯಲ್ಲಿ ನಿರ್ಭಂಧಿಸಲಾಗುತ್ತಿದೆ

ಎಲ್ಲಾ ವಾಹನಗಳನ್ನು ಗಡಿಯಲ್ಲಿ ಬಂದ್ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.