ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಂಗನಕಾಯಿಲೆ ಭೀತಿ ಆವರಿಸಿದ ಹಿನ್ನಲೆಯಲ್ಲಿ ಜನರಿಗೆ ಹಾಗೂ ಮಂಗಗಳಿಗೆ   ರಕ್ಷಣೆ ನೀಡುವಂತೆ ಕೋರಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಮುಖ್ಯಪ್ರಾಣನ ಮೊರೆ ಹೋಗಿದೆ. ಇಂದ್ರಾಳಿಯ ಪ್ರಸಿದ್ದ ಮುಖ್ಯಪ್ರಾಣನ ಸನ್ನಿಧಿಯಲ್ಲಿ ಇಂದು ಮಂಗನ ಕಾಯಿಲೆ ಯಾರಿಗೂ ಬಾಧಿಸದಿರಲಿ ಹಾಗೂ ಕಾಯಿಲೆ ದೂರವಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು , ಬಡಗಬೆಟ್ಟು ಕ್ರೆಡಿಟ್ ಕೋ_ ಅಪರೇಟಿವ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ನಗರಸಭಾ ಸದಸ್ಯ ಅಶೋಕ್ ನಾಯ್ಕ್, ಕುಶಾಲ್ ಶೆಟ್ಟಿ , ಮನೋಹರ್ ಶೆಟ್ಟಿ, ಶೋಭಾ ಡಿ ಶೆಟ್ಟಿ,ಅರವಿಂದ ಶೆಟ್ಟಿ, ರವೀಂದ್ರನಾಯಕ್ ಮುಂತಾದವರು ಉಪಸ್ಥಿತರಿದ್ದರು.
				 
								 
															





 
															 
															 
															











