ಮಂಗಳೂರು: ಹವಮಾನ ಇಲಾಖೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಆ.29) ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ(Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












