ಮಂಗಳೂರು ಕದ್ರಿ ಉದ್ಯಾನವನದಲ್ಲಿ ಮೇ 28ರಿಂದ ಮಾವು ಮೇಳ

ಮಂಗಳೂರು: ರಾಮನಗರ ಜಿಲ್ಲಾ ಮಾವು ಬೆಳೆಗಾರರ ಮಾರಾಟ ಸಂಘ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೇ 28ರಿಂದ 31ರವರೆಗೆ ಕದ್ರಿ ಉದ್ಯಾನವನದಲ್ಲಿKadri Park ನಲ್ಲಿ ಮಾವು ಮೇಳ ಆಯೋಜಿಸಲಾಗಿದೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಲಾದ ವಿವಿಧ ತಳಿಯ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರಲಿವೆ ಎಂದು ತಿಳಿಸಿದರು.

ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ ಹಾಗೂ ಬೆಂಗನಪಳ್ಳಿ ಶುಗರ್ ಬೇಬಿ ಸೇರಿದಂತೆ ಹಲವು ತಳಿಗಳ ಮಾವುಗಳು ಮಾರಾಟಕ್ಕೆ ಇರಲಿವೆ.

ಪ್ರಗತಿಪರ ಕೃಷಿಕ ವಾಸು ಮಾತನಾಡಿ, ರಾಮನಗರದಿಂದ ಸುಮಾರು 25 ಮಂದಿ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರತಿದಿನ ಬೆಳಗ್ಗೆ 8ರಿಂದ ರಾತ್ರಿ 8:30ರವರೆಗೆ ಮಾರಾಟ ನಡೆಯಲಿದೆ ಎಂದರು. ಈ ಬಾರಿ ಸುಮಾರು 25 ಟನ್ ಮಾವು ಮಾರಾಟವಾಗುವ ನಿರೀಕ್ಷೆ ಇದೆ ಎಂದರು.

ಮೇ 28ರಂದು ಪೂರ್ವಾಹ್ನ 11 ಗಂಟೆಗೆ ಯು.ಟಿ.ಖಾದರ್ U. T. Khader ಮೇಳವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ D. Vedavyas Kamath ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ Capt. Brijesh Chowta, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಇದೇ ವೇಳೆ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಮಾತನಾಡಿ, ಅನುದಾನದ ಕೊರತೆಯಿಂದಾಗಿ ಈ ಬಾರಿ ತೋಟಗಾರಿಕಾ ಇಲಾಖೆ ನೇರವಾಗಿ ಮಾವು ಮೇಳ ಆಯೋಜಿಸುತ್ತಿಲ್ಲ. ಆದರೆ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಳೆದ ವರ್ಷ ಜಿಲ್ಲಾ ಪಂಚಾಯತ್ ಪ್ರಚಾರ ಸಾಹಿತ್ಯ ಯೋಜನೆಯಡಿ ₹75,000 ಅನುದಾನ ನೀಡಲಾಗಿತ್ತು. ಈ ವರ್ಷ ಆ ಯೋಜನೆಯನ್ನು ರಾಜ್ಯಮಟ್ಟದಲ್ಲಿ ರದ್ದುಗೊಳಿಸಲಾಗಿದೆ ಎಂದರು.