ಮಂಗಳೂರು ವಿ.ವಿ. ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ತಂಡ ಚಾಂಪಿಯನ್‌

ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ತೆಂಕನಿಡಿಯೂರು ಕಾಲೇಜಿನಲ್ಲಿ ಆಯೋಜಿಸಿದ್ದ ಮಂಗಳೂರು ವಿ.ವಿ. ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್‌ ಕಾಲೇಜು ತಂಡವನ್ನು ಸೋಲಿಸಿದ ಉಜಿರೆ ಎಸ್‌ಡಿಎಂ ಕಾಲೇಜು ತಂಡ ಚಾಂಪಿಯನ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಆಳ್ವಾಸ್‌ ಕಾಲೇಜು ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ತಂಡ ತೃತೀಯ ಪ್ರಶಸ್ತಿ ಪಡೆದುಕೊಂಡಿತು.
ಇದಕ್ಕೂ ಮೊದಲು ನಡೆದ ಉಡುಪಿ ವಲಯ ಮಟ್ಟದ ಪಂದ್ಯಾವಳಿಯ ಫೈನಲ್‌ನಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ತಂಡವನ್ನು ಮಣಿಸಿದ ಆಳ್ವಾಸ್‌ ಕಾಲೇಜು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಪ್ರಶಸ್ತಿ ವಿತರಣಾ ಸಮಾರಂಭದ
ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಮಾಜಿ ಕುಲಪತಿ ಡಾ. ಕಿಶೋರ್ ಕುಮಾರ್
ಸಿ.ಕೆ, ಕಾಲೇಜು ಅಭಿವೃದ್ಧಿ ಸಮಿತಿಯ ದಯಾನಂದ ಶೆಟ್ಟಿ, ಹರಿದಾಸ್ ಕೂಳೂರು, ಹಿರಿಯಡಕ
ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನಾ, ಪ್ರೊ. ಪ್ರಸಾದ್ ರಾವ್ ಎಂ.
ಉಪಸ್ಥಿತರಿದ್ದರು.