ಮಣಿಪಾಲ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಮಗುಚಿ ಬಿದ್ದ ಕಾರು

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ಮಣಿಪಾಲ-ಪೆರಂಪಳ್ಳಿ ರಸ್ತೆಯ ಶಾಂಭವಿ ಅಪಾರ್ಟ್ಮೆಂಟ್ ಬಳಿ ನಡೆದಿದೆ.

ಕಾರು ಮಣಿಪಾಲದಿಂದ ಪೆರಂಪಳ್ಳಿ ಕಡೆಗೆ ಹೋಗುತ್ತಿದ್ದು, ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆಯ ಬದಿಯ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.