ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












