ಉಡುಪಿ: ಲಂಡನ್ ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ (ಎಸ್‌ಯು) ಅಧ್ಯಕ್ಷೆ ಮಣಿಪಾಲ ಮೂಲದ ರಶ್ಮಿ ಸಾಮಂತ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಶ್ಮಿ ಇತ್ತೀಚೆಗೆಷ್ಟೇ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. ಈ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಕೂಡ ಆಗಿದ್ದರು.
ಆದರೆ, ರಶ್ಮಿ ಅವರು ಈ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಜನಾಂಗೀಯ ಮತ್ತು ಸಂವೇದನಾರಹಿತವಾದ ಹೇಳಿಕೆಗಳಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.