ಮಣಿಪಾಲ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ದನ

ಮಣಿಪಾಲ: ರಸ್ತೆ ದಾಟುತ್ತಿದ್ದ ದನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದನವು ಮೂರು ಕಾಲುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲದ ಈಶ್ವರನಗರದ ಪೆಟ್ರೋಲ್ ಬಂಕ್ ಬಳಿ ಇಂದು ಸಂಜೆ ಸಂಭವಿಸಿದೆ.

ಮಣಿಪಾಲದಿಂದ ಪರ್ಕಳದ ಕಡೆ ತೆರಳುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರಿನ ಚಾಲಕ ಅತೀ ವೇಗವಾಗಿ ಬಂದು ರಸ್ತೆ ದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ದನ ರಸ್ತೆ ಬದಿಗೆ ಬಂದು ಬಿದ್ದಿದೆ. ಘಟನೆಗೆ ಕಾರು ಚಾಲಕನ ಅತೀ ವೇಗದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಅಲ್ಲಿ ನೆರೆದಿದ್ದ ಜನರು ದನದ ಕರುಣಾಜನಕ ಪರಿಸ್ಥಿತಿ ಕಂಡು ಮರುಕಪಟ್ಟರು.