ಮಣಿಪಾಲ: ಹೋಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ

ಮಣಿಪಾಲ: ಇಲ್ಲಿನ ಆಶ್ಲೇಷ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಗುರುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.

ಕಟ್ಟಡದಲ್ಲಿದ್ದ ಗೋಡೌನ್ ಒಂದರಲ್ಲಿ ಈ ಅವಘಡ ನಡೆದಿದೆ. ಗೋಡೌನ್ ನಲ್ಲಿ ಸಂಗ್ರಹಿಸಿಟ್ಟಿದ್ದ ಕೆಲವೊಂದು ವಸ್ತುಗಳಿಗೆ ಬೆಂಕಿ‌ ತಗಲಿದೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.