ಉಡುಪಿ: ಮಣಿಪಾಲದಲ್ಲಿ ನಡೆದ ವ್ಯಕ್ತಿಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ತೆಲಂಗಾಣ ತಾಂಡ್ಯ ರಮಾನಾಥ ಶ್ರೀನು (30),ಪಡಮಡಿ ತಾಂಡ್ಯದ ಮೋಹನ್ ರಮವಾತ್ (22), ದೇವರಕೊಂಡ ಚಿಂತಾಲ್ ತಾಂಡಾದ ಪರಮೇಶ್ (30), ಚಿಂತಾಲ್ ತಾಂಡಾದ ಪಾಲ್ಯ ವಿಜಯ್ (25) ಬಂಧಿತ ಆರೋಪಿಗಳು.
ಮಣಿಪಾಲದಲ್ಲಿ ರಾಜೇಶ್ ಎಂಬವರನ್ನು ಕಾರಿನಲ್ಲಿ ಬಲಾತ್ಕಾರವಾಗಿ ಕುಳ್ಳಿರಿಸಿ ಅಪಹರಣ ಮಾಡಲಾಗಿತ್ತು. ತೆಲಂಗಾಣದಲ್ಲಿರುವ ವ್ಯವಹಾರದ ವಿಚಾರವಾಗಿ ಅಪಹರಣ ಮಾಡಲಾಗಿದೆ ಎಂದು ಅವರ ಸಹೋದರ ಮಣಿಪಾಲ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಗಳನ್ನು ತೆಲಂಗಾಣ ರಾಜ್ಯದ ಜಗತಿಹಾಳ್ ಜಿಲ್ಲೆಯ ಮುಖ್ಯ ರಸ್ತೆ ಕರಿಂ ನಗರದ ಗೋವಿಂದಪಲ್ಲಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ.

















