ಮಣಿಪಾಲ: ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2020ರ ನೋಂದಣಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
20ನೇ ವರ್ಷದ ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ.
ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ತಿಳಿಸಿದರು.
ಆರೋಗ್ಯ ಕಾರ್ಡ್ ಸೌಲಭ್ಯ:
*ವೈದ್ಯರ ಸಮಾಲೋಚನೆ ಶೇ. 50ರಷ್ಟು ರಿಯಾಯಿತಿ
*ಪ್ರಯೋಗಾಲಯ ಪರೀಕ್ಷೆ ಶೇ. 30 ರಷ್ಟು ರಿಯಾಯಿತಿ
*ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ. 25ರಷ್ಟು ರಿಯಾಯಿತಿ
*ಸಿಟಿ, ಎಂಆರ್ ಐ, ಅಲ್ಟ್ರಾಸೌಂಡ್ ಶೇ. 20 ರಿಯಾಯಿತಿ
*ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ. 20 ರಿಯಾಯಿತಿ
* ಔಷಧಾಲಯಗಳಲ್ಲಿ ಶೇ. 12ರ ವರೆಗೆ ರಿಯಾಯಿತಿ
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಮಣಿಪಾಲ ಆರೋಗ್ಯ ಕಾರ್ಡಿನ ಹೆಚ್ಚಿನ ಮಾಹಿತಿಗಾಗಿ (www.khmanipal.com) ಗೆ ಭೇಟಿ ನೀಡಬಹುದು.