ಮಣಿಪಾಲ:ದಿನಾಂಕ 31.10.2025 ಹಾಗೂ 01.11.2025 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ
ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ್
ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ
ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.


















