ಮಣಿಪಾಲ: ಕೆಎಂಸಿ ಡೀನ್ ಆಗಿ ಡಾ.ಅನಿಲ್ ಕೆ.ಭಟ್ ನೇಮಕ.

ಉಡುಪಿ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೂತನ ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಇಂದು ನೇಮಕ ಮಾಡಲಾಗಿದೆ.

ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆಡಳಿತಾಧಿಕಾರಿಯಾಗಿರುವ ಡಾ.ಭಟ್ ಅವರು ಮೂಳೆ ಚಿಕಿತ್ಸೆ, ಕೈ ಶಸ್ತ್ರಚಿಕಿತ್ಸೆ, ಸಂಶೋಧನೆ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ.

ಡಾ.ಭಟ್ ಅವರು ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಮತ್ತು ಕೆಎಂಸಿ ಮಣಿಪಾಲದಿಂದ ಮೂಳೆಚಿಕಿತ್ಸೆಯಲ್ಲಿ ಎಂಎಸ್ ಪದವಿಯೊಂದಿಗೆ ಡಿಎನ್ಬಿ ಪದವಿ ಪಡೆದಿದ್ದಾರೆ. 1999ರಲ್ಲಿ ಕೆಎಂಸಿಯಲ್ಲಿ ವೃತ್ತಿಜೀವನ ಪ್ರಾರಂಭಿಸಿದ ಅವರು ಮೂಳೆಚಿಕಿತ್ಸೆ ವಿಭಾಗದ ಮುಖ್ಯಸ್ಥರು (2014-2019) ಮತ್ತು ಅಸೋಸಿಯೇಟ್ ಡೀನ್ (2019ರಿಂದ) ಆಗಿ ಕಾರ್ಯನಿರ್ವಹಿಸಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ ಮೂಳೆ ತಜ್ಞರಾದ ಡಾ. ಭಟ್ ಮಣಿಕಟ್ಟಿನ ಶಸ್ತ್ರಚಿಕಿತ್ಸೆ, ಆರ್ತ್ರೋಸ್ಕೋಪಿ, ಜನ್ಮಜಾತ ವಿರೂಪ ತಿದ್ದುಪಡಿ ಮತ್ತು ಎಐ-ಸಂಯೋಜಿತ ಸೋಂಕು ಗಳನ್ನು ಪತ್ತೆಹಚ್ಚುವ ಸಂಶೋಧನೆಗಳ ನೇತೃತ್ವ ವಹಿಸಿದ್ದರು. ಡಾ. ಭಟ್ 130ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ.