ಮಣಿಪಾಲ: ₹3.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರ್ಕಳ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

ಉಡುಪಿ: ಉಡುಪಿ ನಗರಸಭೆ ವತಿಯಿಂದ ಸುಮಾರು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರ್ಕಳ ಮಾರುಕಟ್ಟೆ ಸಂಕೀರ್ಣದ ನಿರ್ಮಾಣ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.*

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರಸಭೆ ವತಿಯಿಂದ ಸುಮಾರು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರ್ಕಳ ಮಾರುಕಟ್ಟೆ ಸಂಕೀರ್ಣದಲ್ಲಿ ತರಕಾರಿ ಮಾರುಕಟ್ಟೆ, ಮೀನು ಮಾರುಕಟ್ಟೆ, ಮಾಂಸದ ಅಂಗಡಿ, ನಿತ್ಯ ಮಾರುಕಟ್ಟೆ, ಅಂಗಡಿ ಮಳಿಗೆಗಳನ್ನು ಒಳಗೊಂಡಿದ್ದು, ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಮಾರುಕಟ್ಟೆ ಶೀಘ್ರದಲ್ಲೇ ನಿರ್ಮಾಣಗೊಂಡು ಪರ್ಕಳ ಹಾಗೂ ಪರಿಸರದ ಜನತೆಗೆ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ನಗರಸಭೆ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಮಂಜುನಾಥ ಮಣಿಪಾಲ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಅಶ್ವಿನಿ, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಹಸಿ ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಎಚ್. ಸಾಲ್ಯಾನ್, ಮುಖಂಡರಾದ ಶ್ರೀ ದಿಲೀಪ್ ರಾಜ್ ಹೆಗ್ಡೆ ,ಶ್ರೀ ದಿನೇಶ್ ಶೆಟ್ಟಿ, ಶ್ರೀ ದಿವಾಕರ ಶೆಟ್ಟಿ, ಶ್ರೀ ಪ್ರಕಾಶ್ ಶೆಟ್ಟಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀ ದುರ್ಗಾ ಪ್ರಸಾದ್ ಹಾಗೂ ಮೀನು ಮಾರಾಟಗಾರ ಮಹಿಳೆಯರು, ಸ್ಥಳೀಯ ಪ್ರಮುಖರು, ಉಪಸ್ಥಿತರಿದ್ದರು.