ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್: ಚಾಂಪಿಯನ್ ಆಗಿ ಹೊರಹೊಮ್ಮಿದ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ಅನ್ನು ಆಯೋಜಿಸಿತ್ತು. ಡಿ.16 ಆರಂಭವಾದ ಪಂದ್ಯಾಟವು ಡಿ.೧೯ ರಂದು ಕೊನೆಗೊಂಡಿತು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಹಾಕೆ ಅಕ್ಷಯ್ ಮಚ್ಚೇಂದ್ರ ಪಾಲ್ಗೊಂಡಿದ್ದರು.

ಎಲ್ಲಾ ತಂಡಗಳು ಒಟ್ಟು 1,20,000 ರೂ. ಮೊತ್ತವನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ನಿಧಿಗೆ ದೇಣಿಗೆಯಾಗಿ ನೀಡಿದವು. ಚೆಕ್ ಅನ್ನು ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಭಟ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕೆಎಂಸಿ ಡೀನ್ ಡಾ. ಶರತ್ ಕೆ ರಾವ್ , ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿ ಓ ಓ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಡಾ ಕೀರ್ತಿನಾಥ್ ಬಲ್ಲಾಳ, ಸಚಿನ್ ಕಾರಂತ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ನಲ್ಲಿ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಅವರು ವಿಜೇತರಾಗಿ ಉಡುಪಿ ಎಸ್ ಪಿ 11 ರನ್ನರ್ ಆಪ್ ಪ್ರಶಸ್ತಿ ಪಡೆದರು. ಪ್ರಶಾಂತ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಕಾರ್ತಿಕ್ ಉತ್ತಮ ದಾಂಡಿಗ ಮತ್ತು ಸಿದ್ದೇಶ್ ಉತ್ತಮ ದಾಳಿಗಾರ ಪ್ರಶಸ್ತಿ ಪಡೆದರು.