ಮಣಿಪಾಲ: ಯುವಕ ನೇಣಿಗೆ ಶರಣು

ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಅನಂತ ನಗರದಲ್ಲಿ ನಡೆದಿದೆ.

ಮೊಹಮ್ಮದ್ ನಿಹಾಲ್ ನೇಣಿಗೆ ಶರಣಾದ ಯುವಕ. ಇವರು ಕೆಲವು ವರ್ಷಗಳಿಂದ ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದರು.

ಇದೇ ಖಿನ್ನತೆಯಲ್ಲಿದ್ದ ನಿಹಾಲ್ ಫೆ.28 ರಂದು ಮುಂಜಾನೆ ತಾನು ವಾಸವಿದ್ದ ರೂಮಿನಲ್ಲಿ ಸೀಲಿಂಗ್ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.