ಮಣಿಪಾಲ: ಮಣಿಪಾಲದ ಬೋಡಾ ಶೀರಾ ಕ್ಯಾಂಟೀನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಭಟ್ಕಳ ಮೂಲದ ಮುಂಡಳ್ಳಿ ನಿವಾಸಿ ನಮಿತಾ (22) ಎಂಬುವವರು ಜುಲೈ 16ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 135 ಸೆಂ.ಮೀ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಮೊ.ನಂ: 9480805448, 9480805475 ಅಥವಾ ಕಂಟ್ರೋಲ್ ರೂಂ ನಂ: 0820-2570328 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.