ಮಣಿಪಾಲ: ಯುವತಿ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಉಡುಪಿ: ಯುವತಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಾರಣಕಟ್ಟೆ ನಿವಾಸಿ ಜಗದೀಶ್ (24), ಪೆರ್ಡೂರು ನಿವಾಸಿ ಗಣೇಶ್ (26)  ಗುರುತಿಸಲಾಗಿದೆ. ಇವರು ಮಾ.17 ರಂದು ಯುವತಿಯನ್ನು ಮಣಿಪಾಲ ಲಾಡ್ಜ್ ಒಂದಕ್ಕೆ ಕರೆದೊಯ್ದ ಅತ್ಯಾಚಾರ ಎಸಗಿದ್ದರು.
ಬಳಿಕ ಆರೋಪಿಗಳು ಯುವತಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಅಸ್ವಸ್ಥಗೊಂಡಿದ್ದ ಯುವತಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಆಸ್ಪತ್ರೆಯವರು ನೀಡಿದ ಮಾಹಿತಿಯಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಗೆ ನಡೆಸಿದ ಪೊಲೀಸರು ಮಾ.24 ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ನ್ಯಾಯಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.