ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಹಾರೈಸಿದ ಮಂಜುನಾಥ ಭಂಡಾರಿ

ನವದೆಹಲಿ: ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ತಿಳಿಸಿದರು.