ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಅನೇಕ ಹಿರಿಯ ಮುಖಂಡರು ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿ ಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲ್ ಬಿಲ್ಲವ ಸಂಘದ ಸ್ಥಾಪಾಕಾಧ್ಯಕ್ಷ, ಬಿಜೆಪಿ ಹಿರಿಯ ಮುಖಂಡ ಆನಂದ ಪೂಜಾರಿ, ಉದ್ಯಮಿ ಕಾಂತಾವರ ಉದಯ್ ಶೆಟ್ಟಿ. ಕುಕ್ಕುಂದೂರು ಪಂಚಾಯತ್ ಸದಸ್ಯ ಹಾಗೂ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್ ಮತ್ತು ಅನೇಕ ಗ್ರಾಮಗಳ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಪಕ್ಷದ ಧ್ವಜನೀಡಿ ಬರಮಾಡಿಕೊಂಡರು.