ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವು ಮಾರ್ಚ್ 10 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 66 ಬಳಿಯ ಕಟಪಾಡಿ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ.ರಘುಪತಿ ಭಟ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಎಸ್ ಆಚಾರ್ಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.