ಉಡುಪಿ: ಸುಮಾರು 1500 ವರ್ಷಗಳ ಇತಿಹಾಸವಿರುವ ಇತ್ತೀಚಿಗೆ ವೈಭವದ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಸುಮಾರು 9 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಾರ್ಚ್ 22 ರಿಂದ 24ರ ತನಕ ನೂತನ ಧ್ವಜ ಸ್ತಂಭ ಪ್ರತಿಷ್ಠೆ ಮತ್ತು ಧೂಳಿ ಮಂಡಲ ಸೇವೆ ಜರಗಲಿರುವುದು ಎಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ ವಿ ಆಚಾರ್ಯ ತಿಳಿಸಿದ್ದಾರೆ.
ಮಾರ್ಚ್ 21 ಹಸಿರು ಹೊರಕಾಣಿಕೆ ಮಾರ್ಚ್ 21ರ ಮಂಗಳವಾರ ಸಾಯಂಕಾಲ 4.00 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದಿಂದ ಹಸಿರು ಹೊರೆ ಕಾಣಿಕೆ ಚಾಲನೆ ನೀಡಲಾಗುವುದು.
ಧಾರ್ಮಿಕ ಸಭೆ ಸಾಂಸ್ಕೃತಿಕ ವೈಭವ
ಮಾರ್ಚ್ 22ರಿಂದ ದಿನಾಲು ಸಾಯಂಕಾಲ 5.30 ರಿಂದ ಧಾರ್ಮಿಕ ಸಭೆ ಮತ್ತು ಸ್ಥಳೀಯರ ಸಹಕಾರದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 24ರ ರಾತ್ರಿ 9:00ಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೂಪರ್ ಹಿಟ್ ನಾಟಕ “ಶಾಂಭವಿ” ಪ್ರದರ್ಶನ ನಡೆಯಲಿದೆ.
ಮಾರ್ಚ್ 24 ಮಹಾ ಅನ್ನಸಂಪರ್ಪಣೆ
ಮಾರ್ಚ್ 24 ಶುಕ್ರವಾರ, ಬೆಳಿಗ್ಗೆ 9.45 ಕ್ಕೆ ಒದಗುವ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀದೇವಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ತದನಂತರ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಸುಮಾರು 35000 ಸಾವಿರ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ತಿಳಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗೇಶ್ ಹೆಗ್ಡೆ, ಮಾತನಾಡಿ ದ್ವಜಸ್ತಂಬಕ್ಕೆ ಭೋಗಿ ಮರವನ್ನು ಆಯ್ಕೆ ಮಾಡಲಾಗಿದ್ದು ಸುಮಾರು ನಾಲ್ಕು ತಿಂಗಳ ಕಾಲ ಸಂಪೂರ್ಣ ಸಾವಯವ ಎಳ್ಳೆಣ್ಣೆ ಹಾಕಿ ಇಡಲಾಗಿದ್ದು ಇದೀಗ ಧ್ವಜ ಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಲಾಗಿ ಈ ಮೂಲಕ ದೇವಸ್ಥಾನದ ಜೀರ್ಣೋದ್ಧಾರ ಸಂಪನ್ನಗೊಳ್ಳಲಿದೆ ಎಂದರು. ಈ ಪತ್ರಿಕಾಗೋಷ್ಠಿಯಲ್ಲಿ ದೇಗುಲದ ಪ್ರಧಾನ ಅರ್ಚಕ ಕಡಿಯಾಳಿ ರತ್ನಾಕರ ಉಪಾಧ್ಯ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿಯಾದ ಸತೀಶ್ ಕುಲಾಲ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು/ ಹಸಿರು ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಶೇರಿಗಾರ್, ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಚಂದ್ರಶೇಖರ್ ಉಪಸ್ಥಿತರಿದ್ದರು.