ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ವಾರಿಯರ್ಸ್ ಗೆ ಅಭಿನಂದನಾ ಸಮಾರಂಭವು ಮಾರ್ಚ್ 29 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.