ಬೈಂದೂರು: ಇಲ್ಲಿನ ನಾವುಂದದಲ್ಲಿ ಮುಖ್ಯ ಕಛೇರಿ ಹೊಂದಿರುವ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಬಡಾಕೆರೆಯ ನೂತನ ಶಾಖೆ ಮತ್ತು ಕಟ್ಟಡದ ಉದ್ಘಾಟನಾ ಸಮಾರಂಭ ಮೇ. 31ರಂದು ಬೆಳಿಗ್ಗೆ 10.30ಕ್ಕೆ ನೆರವೇರಲಿದೆ.
ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೂತನ ಶಾಖೆ ಮತ್ತು ಕಟ್ಟಡವನ್ನು ಉದ್ಘಾಟಿಸುವರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಗೋದಾಮು ಉದ್ಘಾಟಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಶುಭಾಶಂಸನೆ ಮಾಡುವರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಬಾಬು ಶೆಟ್ಟಿ, ನಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜೇನ್‌ಮೇರಿ ಒಲಿವೇರ, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಸಹಾಯಕ ನಿಬಂಧಕಿ ಚಂದ್ರಪ್ರತಿಮಾ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ, ಸ್ಥಳದಾನಿ ವನಜಾ ಕುಶಲ್ ಶೆಟ್ಟಿ, ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.