ಗಂಗೊಳ್ಳಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಮರವಂತೆ ಗ್ರಾಮದ ಮೂಡು ಮರವಂತೆ ಎಂಬಲ್ಲಿ ಫೆ.3ರಂದು ಮಧ್ಯಾಹ್ನ ನಡೆದಿದೆ.
ಮೂಡು ಮರವಂತೆ ಶ್ರೀನಿವಾಸ ನಾಯಕ್ ಅವರ ಪತ್ನಿ 53ವರ್ಷದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಸುಮಾರು 12 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಸಂಪೂರ್ಣ ಗುಣಮುಖವಾಗಿರುವುದಿಲ್ಲ. ಇದೇ ಖಿನ್ನತೆಯಲ್ಲಿ ಫೆ.3ರಂದು ಮಧ್ಯಾಹ್ನ 2:30ರ ಸುಮಾರಿಗೆ ಮನೆಯ ಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.