ಉಡುಪಿ: ಇಂದು ಪರಿವರ್ತನಾ ಸಮಾವೇಶ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಶ್ರಯ, ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ಮಾ. 10ರ ಮಧ್ಯಾಹ್ನ 2.30ಕ್ಕೆ ಕಲ್ಸಂಕ ರಾಯಲ್ಗಾರ್ಡನ್‌ನಲ್ಲಿ ‘ಜಿಲ್ಲಾ ಮಟ್ಟದ ಪರಿವರ್ತನಾ ಸಮಾವೇಶ’ ನಡೆಯಲಿದೆ.
 ಲೋಕಸಭೆ ಚುನಾವಣೆಯ ಪೂರ್ವಭಾವಿಯಾಗಿ ಕಾರ್ಯಕರ್ತರಿಗೆ ಸಿದ್ಧತೆ ಮತ್ತು ಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಯಪಡಿಸುವ ಉದ್ದೇಶದಿಂದ ಈ ಸಮಾವೇಶ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಕೆ. ಪಾಟೀಲ್, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿ ಡಾ| ವೀರಪ್ಪ ಮೊಲಿ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್‌, ಬಿ.ಕೆ. ಹರಿಪ್ರಸಾದ್‌, ಡಾ| ಬಿ.ಎಲ್. ಶಂಕರ್‌, ಸಿ.ಎಂ. ಇಬ್ರಾಹಿಂ, ಸಚಿವೆ ಡಾ| ಜಯಮಾಲಾ, ಮಾಜಿ ಸಚಿವರಾದ ಪ್ರಮೋದ್‌ ಮಧ್ವರಾಜ್‌, ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕರು ಉಪಸ್ಥಿತರಿರಲಿದ್ದಾರೆ.

ಸುಮಾರು 15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ ತಿಳಿಸಿದ್ದಾರೆ.