ಉಡುಪಿ: ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ.), ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಉಡುಪಿ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಕುಂಜಿಬೆಟ್ಟು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾರ್ಚ್ 8 ರಂದು ಬೆಳಿಗ್ಗೆ 9.30 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಶಿ ಉದ್ಘಾಟಿಸಲಿದ್ದು, ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ. ಪ್ರಕಾಶ್ ಕಣಿವೆ ಅಧ್ಯಕ್ಷತೆ ವಹಿಸಲಿದ್ದಾರೆ.