ಮಾ.8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶವು ಮಾರ್ಚ್ 8 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.