ಗಾಂಜಾ ಸೇವನೆ: ಮಣಿಪಾಲದಲ್ಲಿ ಐವರು‌ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಣಿಪಾಲ ಮಾಂಡವಿ ಎಮರಾಲ್ಡ್ ಅಪಾರ್ಟ್ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು 22ವರ್ಷದ ನಿಖಿಲ್ ಎಮ್, 25ವರ್ಷದ ತನ್ವೀರ್ ರೆಡ್ಡಿ, 22ವರ್ಷದ ಶರಣ್ ಶೆಟ್ಟಿ , 21ವರ್ಷದ ರಾಹುಲ್ ಸೀಮಾ, 21ವರ್ಷದ ತುಶಾರ್ ಜಿ ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಮಾ.22ರಂದು‌ ಪೊಲೀಸರ ಕೈ ಸೇರಿದ ವರದಿಯಲ್ಲಿ ಐದು ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.