ಕೆಪಿಸಿಸಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ

ಬೆಂಗಳೂರು: ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಹೆಚ್. ಅಂಜನೇಯ, ರಾಣಿ ಸತೀಶ್, ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ಪದ್ಮಪ್ರಕಾಶ್ ಸೇರಿದಂತೆ ಮತ್ತಿತರರು ಮುಖಂಡರು ಭಾಗವಹಿಸಿದ್ದರು.