ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ

ಉಡುಪಿ, ಮೇ 28: ಪರಿಶಿಷ್ಟ ಜಾತಿಯವರಲ್ಲಿ ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ.ಗಳನ್ನು ಸರ್ಕಾರದಿಂದ ನೀಡಲಾಗುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ, ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.