ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಹಾಗೂ ಗಸ್ತು
ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ (ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ರಕ್ತನಿಧಿ ಕೇಂದ್ರ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರವು ಸೆ.11 ರಂದು ಬೆಳಗ್ಗೆ 10.30 ಕ್ಕೆ ನಗರದ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.

ಕಾರ್ಯಕಮ್ರವನ್ನು ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ ಕರಿಕಾಳನ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ (ರಿ)ದ ಜಿಲ್ಲಾಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ. ವೀಣಾ ಕುಮಾರಿ, ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಶಂಕರ ನಾಯ್ಕ್, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ್ಚಂದ್ರ, ಕರ್ನಾಟಕ ರಾಜ್ಯ ಗಸ್ತು ಅರಣ್ಯ
ಪಾಲಕರ ಮತ್ತು ವೀಕ್ಷಕರ ಸಂಘ (ರಿ)ದ ಗೌರವಾಧ್ಯಕ್ಷ ಹೆಚ್ ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.