ಶ್ರೀನಗರದ ದಾಲ್ ಸರೋವರದ ಪ್ರವಾಸಿ ಕೇಂದ್ರದಲ್ಲಿ ಭಾರೀ ಅಗ್ನಿ ದುರಂತ: ಕೋಟ್ಯಂತರ ಮೌಲ್ಯದ ಆಸ್ತಿ ನಾಶ

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ದಾಲ್ ಸರೋವರದ ಪ್ರವಾಸಿ ಕೇಂದ್ರದಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಹೌಸ್‌ಬೋಟ್‌ಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಲ್ಲ ಪ್ರವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕನಿಷ್ಠ ಐದು ಹೌಸ್‌ಬೋಟ್‌ಗಳು ಮತ್ತು ಮೂರು ಗುಡಿಸಲುಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.