ಕುಂದಾಪುರ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರರಣದ ಮರು ತನಿಖೆಗೆ ಆಗ್ರಹಿಸಿ ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸಾವಿರಾರು ಜನರು ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಜಸ್ಟಿಸ್ ಫಾರ್ ಸೌಜನ್ಯ ಎನ್ನುವ ಘೋಷಣೆಗಳನ್ನು ಕೂಗುತ್ತಾ ನೆಹರು ಮೈದಾನದಿಂದ ಹೊರಟು ಶಾಸ್ತ್ರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ಕುಟುಂಬಿಕರು ಭಾಗವಹಿಸಿದರು.