ಕೇಂದ್ರದಿಂದ ರಾಹುಲ್ ಗಾಂಧಿ ವಿರುದ್ದ ಸುಳ್ಳು ಪ್ರಕರಣ ಸೃಷ್ಟಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಹೆಸರಲ್ಲಿ ಸಂಸ್ಥೆಯ ದುರ್ಬಳಕೆ ಹಾಗೂ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 21, ಮಂಗಳವಾರದಂದು ಸಂಜೆ 4.00 ಗಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿದ್ದಾರೆ.