ಉಡುಪಿ: ಇಂದು ಬಿಜೆಪಿ ‘ಬೃಹತ್ ಪಾದಯಾತ್ರೆ’; ಸಮಾರೋಪ ಭಾಷಣ

ಉಡುಪಿ: ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬುಧವಾರ ಸಂಜೆ 3.30ಕ್ಕೆ ಉಡುಪಿ ಜೋಡುಕಟ್ಟೆಯಿಂದ ಸಿಟಿ ಬಸ್ ನಿಲ್ದಾಣದ ವರೆಗೆ ‘ಬ್ರಹತ್ ಪಾದಯಾತ್ರೆ’ ನಡೆಯಲಿದೆ.

ಸಮಾರೋಪ ಭಾಷಣ: ಪಾದಯಾತ್ರೆಯ ಬಳಿಕ ಉಡುಪಿ ಸಿಟಿ ಬಸ್ ನಿಲ್ದಾಣ – ನರ್ಮ್ ಬಸ್ ನಿಲ್ದಾಣದ ಬಳಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಂದ ಸಮಾರೋಪ ಭಾಷಣ ನಡೆಯಲಿದೆ.

ಈ ಬೃಹತ್ ಪಾದಯಾತ್ರೆ ಮತ್ತು ಸಮಾರೋಪ ಭಾಷಣದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದು, ಪಕ್ಷದ ಪ್ರಮುಖರು ಮತ್ತು ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕಾಗಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದ್ದಾರೆ.