ಹಿರಿಯಡಕ: ಸುಧಾಕರ್ ಪೂಜಾರಿ ಅಭಿಮಾನಿ ಸಂಘ (ರಿ.) ಬೊಮ್ಮರಬೆಟ್ಟು ಇದರ 15ನೇ ವರ್ಷದ ವಾರ್ಷಿಕೋತ್ಸವ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಸ್ಮರಣಾ ಕಾರ್ಯಕ್ರಮವು ಮೇ12 ರಂದು ಬಸ್ತಿ ಕಲ್ಕುಡ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.
ಸಂಜೆ ಗಂಟೆ 4:30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಸಂಜೆ 7ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ತದಾನಂತರ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮವು 8:30 ಕೆ ನಡೆಯಲಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾದ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ದ.ಕ. ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಉದ್ಯಮಿ ಶಿವಪ್ರಸಾದ್ ಹೆಗ್ಡೆ ಉಪಸ್ಥಿತರಿರುವರು.