ಮೇ 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ.

 ಶ್ರೀ ಕ್ಷೇತ್ರದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ ಸೂತ್ರವನ್ನು ನೀಡಲಾಗುವುದು. ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಸಾಮೂಹಿಕ ವಿವಾಹದ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಕಳೆದ ವರ್ಷದಲ್ಲಿ 12,160 ಜತೆ ಸಾಮೂಹಿಕ ವಿವಾಹ ಮದುವೆಯಾಗಿದ್ದರು.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಎ. 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08256-277144 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.