ಮೇ 11: ಭಗೀರಥ ಜಯಂತಿ

ಉಡುಪಿ, ಮೇ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆಯು ಮೇ 11 ರಂದು ಬೆಳಗ್ಗೆ 10 ಕ್ಕೆ ರಜತಾದ್ರಿ ಜಿಲ್ಲಾಧಿಕಾರಿಗಳ ಕೋರ್ಟ್‍ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ.