ಮೇ 17ರ ವರೆಗೆ ಲಾಕ್‍ಡೌನ್ ಅವಧಿ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಲಾಕ್‌ಡೌನ್ ಅವಧಿಯನ್ನು ಮೇ.17ರವರೆಗೆ ವಿಸ್ತರಣೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶವ್ಯಾಪಿ ಲಾಕ್‌ಡೌನ್ ಮೇ.3ಕ್ಕೆ ಮುಗಿಯಬೇಕಿತ್ತು. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ.

ಮೇ.3ರ ನಂತರ ಎರಡು ವಾರ ಲಾಕ್‍ಡೌನ್ ವಿಸ್ತರಿಸಿರುವುದಾಗಿ ಪ್ರಕಟಣೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯವು ಈ ಅವಧಿಯಲ್ಲಿ ಕೆಲವು ಕಾರ್ಯಗಳಿಗೆ ನಿಯಂತ್ರಣ ಹೇರುವ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಾಗಿ ವಿಂಗಡಿಸಿದ ಪ್ರದೇಶಗಳಲ್ಲಿ ಈ ರೀತಿ ನಿರ್ಬಂಧಗಳಿರಲಿವೆ.

ಹೊಸ ಮಾರ್ಗ ಸೂಚಿಯ ಪ್ರಕಾರ ಹಸಿರು ಮತ್ತು ಕಿತ್ತಳೆ ವಲಯ ಎಂದು ಗುರುತಿಸಿರುವ ಜಿಲ್ಲೆಗಳಲ್ಲಿ ಕೆಲವೊಂದು ಸಡಿಲಿಕೆಗೆ ಅನುಮತಿ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.