ಉಡುಪಿ, ಮೇ 29: ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬ ಘೋಷವಾಕ್ಯದಡಿಯಲ್ಲಿ ಮೇ 31 ರಂದು ಬೆಳಗ್ಗೆ 10 ಕ್ಕೆ ಕಾರ್ಕಳ ತಾಲೂಕಿನ ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಗುವುದು.
ಕಾರ್ಯಕ್ರಮವನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್. ವಿ ಉದ್ಘಾಟಿಸಲಿದ್ದು, ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.