ಮೇ 7: ಬಸವ ಜಯಂತಿ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯು ಮೇ 7 ರಂದು ಬೆಳಗ್ಗೆ 10 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ.