ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದಲ್ಲಿ ಪ್ರಸಕ್ತ ಸಾಲಿಗೆ ಮಣಿಪಾಲದ ಹೆಚ್.ಪಿ.ಆರ್ ಕಾಲೇಜು ಆಫ್ ಪ್ಯಾರಾಮೆಡಿಕಲ್ ಸೈನ್ಸ್ ನ ಮ್ಯಾನೇಜಿಂಗ್ ಡೈರಕ್ಟರ್ ಹಾಗೂ ಪ್ರಾಂಶುಪಾಲ ಹರಿಪ್ರಸಾದ್ ರೈ ಅವರು, ಪೋಷಕ ಸದಸ್ಯತ್ವವನ್ನು ನೋಂದಾಯಿಸಿದ್ದು, ಇತ್ತೀಚೆಗೆ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷರಾದ ಕೂರ್ಮಾರಾವ್ ಎಂ. ಅವರು ಹರಿಪ್ರಸಾದ್ ರೈ ಅವರನ್ನು ಪುಷ್ಪ ನೀಡುವ ಮೂಲಕ ಸಂಸ್ಥೆಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.