ಯಕ್ಷ ಶಿಕ್ಷಣ ಟ್ರಸ್ಟ್ ಸಮಾಲೋಚನಾ ಸಭೆ 

ಉಡುಪಿ: ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ನಡೆದ ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇದರ ಯಕ್ಷಗಾನ ತರಬೇತಿ ನೀಡುವ ಗುರುಗಳ ಸಮಾಲೋಚನಾ ಸಭೆಯಲ್ಲಿ ನಿಕಟ ಪೂರ್ವ ಶಾಸಕ ರಘುಪತಿ ಭಟ್ ಭಾಗವಹಿಸಿದರು.

ಉಡುಪಿ ಸೇರಿದಂತೆ ಈ ವರ್ಷದಿಂದ ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಗಳ ಶಾಲೆಗಳಲ್ಲಿ ತರಬೇತಿ ಆರಂಭಿಸಲಾಗಿದ್ದು, ಒಟ್ಟು 69 ಪ್ರೌಢಶಾಲೆಗಳಲ್ಲಿ 31 ಮಂದಿ ಯಕ್ಷಗಾನ ಗುರುಗಳು ಯಕ್ಷಗಾನ ತರಬೇತಿ ನೀಡುವರು. ಮುಂಬರುವ ಸಾಲಿನಲ್ಲಿ ಬೈಂದೂರು ಹಾಗೂ ಕಾರ್ಕಳ ಕ್ಷೇತ್ರಗಳಲ್ಲೂ ಯಕ್ಷಗಾನ ತರಬೇತಿ ಆರಂಭಿಸುವ ಬಗ್ಗೆ ಸಭೆಯಲ್ಲಿ ಯೋಜನೆ ರೂಪಿಸಲಾಯಿತು.

ಡಿಸೆಂಬರ್ ತಿಂಗಳಲ್ಲಿ ನಡೆಸುವ ಯಕ್ಷಗಾನ ಪ್ರದರ್ಶನದಲ್ಲಿ ಯಕ್ಷಗಾನ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಪ್ರದರ್ಶನಗಳನ್ನು ನೀಡಿ ಈ ಯೋಜನೆ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಈ ಯಕ್ಷ ಅಭಿಯಾನವನ್ನು ಯಶಸ್ವಿಗೊಳಿಸಲು ಕಾಪು ಮತ್ತು ಕುಂದಾಪುರ ಕ್ಷೇತ್ರಕ್ಕೆ ವಿಸ್ತರಿಸಲು ಕೈ ಜೋಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಭೆಯಲ್ಲಿ ಪಾಲ್ಗೊಂಡರು. ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮದ ರೂಪುರೇಷೆಯ ಮಾಹಿತಿ ನೀಡಿದರು.