ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಸಭೆ: ಗೆಲುವಿಗೆ ಪಣ ತೊಡಲು ಯಶ್ ಪಾಲ್ ಸುವರ್ಣ ಕರೆ

ಬೆಂಗಳೂರು: ಬಿಜೆಪಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಭಾಗವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಮೋರ್ಚಾದ ಮೂಲಕ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಪಕ್ಷದ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಧ್ಯಕ್ಷ ರಘು ಕೌಟಿಲ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.